ಮೈಸೂರು : ಸಿಪಿ ಯೋಗೇಶ್ವರ್ ಕಾಂಗ್ರೆಸ್ ಗೆ ಬರುವ ಬಗ್ಗೆ ನನಗೆ ಗೊತ್ತಿಲ್ಲ. ಆದ್ರೆ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಯಾರೇ ಬಂದರೂ ನಮ್ಮ ಪಕ್ಷಕ್ಕೆ ಸ್ವಾಗತ ಎಂದು ಸಿಎಂ ಸಿದ್ದರಾಮಯ್ಯ ಯೋಗೇಶ್ವರ್ ಕಾಂಗ್ರೆಸ್ ಸೇರುವ ಬಗ್ಗೆ ಸುಳಿವು ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಉಪ ಚುನಾವಣೆ ಕುರಿತು ಮಾತನಾಡಿದ ಅವರು, ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ. ಚನ್ನಪಟ್ಟಣ ಶಿಗ್ಗಾವಿ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಅಲ್ಲದೆ, ಚನ್ನಪಟ್ಟಣದಲ್ಲಿ ಡಿಕೆ ಸುರೇಶ್ ಹೆಸರು ಕೂಡ ಇದ್ದು, ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
PublicNext
22/10/2024 12:18 pm