ಮೈಸೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ವಿಚಾರವಾಗಿ ಮೈಸೂರಿನಲ್ಲಿ ಈ ನಡೆಯನ್ನು ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ನಮ್ಮ ಗ್ಯಾರಂಟಿಗಳೇ ಬೇರೆ ವಿಚಾರ. ಇದಕ್ಕೂ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೂ ಸಂಬಂಧ ಇಲ್ಲ ಎಂದಿದ್ದಾರೆ.
ಈಗಾಗಲೇ ಸರ್ಕಾರಿ ನೌಕರರು, ಎರಡು ಕಾರು ಹೊಂದಿರುವವರು, ತೆರಿಗೆ ಕಟ್ಟುತ್ತಿರುವವರು, ಮೂರು ಹೆಕ್ಟೇರ್ ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಬಳಸುತ್ತಿದ್ದಾರೆ. ಅಂತವರು ತಾವೇ ಕಾರ್ಡ್ ವಾಪಸ್ ಮಾಡಬೇಕಾಗಿತ್ತು. ಈಗ ನಾವುಗಳು ಅದನ್ನು ಪರಿಷ್ಕರಣೆ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಈ ಕೆಲಸವನ್ನು ಮುಂಚೆ ಮಾಡಬೇಕಾಗಿತ್ತು. ತಡವಾದವರು ಮಾಡುತ್ತಿದ್ದೇವೆ ಎಂದಿದ್ದಾರೆ.
PublicNext
19/11/2024 10:57 am