ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ರವರು ದಸರಾ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಕೋವಿಡ್‌ನಿಂದ ಎರಡು ವರ್ಷದಿಂದ ಸರಳ ದಸರಾ ಅಚರಣೆ ಮಾಡಲಾಯಿತು. ಈ ವರ್ಷ ಅದ್ದೂರಿ ದಸರಾ ಆಚರಣೆ ಮಾಡುವ ಬಗ್ಗೆ ಉನ್ನತ ಮಟ್ಟದ ಸಮಿತಿಯಲ್ಲಿ ತೀರ್ಮಾನ ಮಾಡಲಾಯಿತು. ಇಂದು ರಾಷ್ಟ್ರಪತಿಗಳು ದಸರಾ ಉದ್ಘಾಟನೆ ಮಾಡಿದ್ದಾರೆ ಎಂದರು.
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ್ ಗೌಡ ಅವರು ಅಲ್ಪಾವಧಿಯಲ್ಲಿ ವಸ್ತು ಪ್ರದರ್ಶನ ಆಯೋಜನೆ ಮಾಡಿದ್ದಾರೆ. 3 ತಿಂಗಳು ವಸ್ತು ಪ್ರದರ್ಶನ ಮಾಡಬೇಕೆಂದು ಬಯಸಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
PublicNext
26/09/2022 09:04 pm