ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ತತ್ವವನ್ನು ನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಿ

ಮೈಸೂರು: ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಮಹಾತ್ಮ ಗಾಂಧೀಜಿಯವರ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ಅವರ ಸರಳತೆ, ಸಮರ್ಥ ನಾಯಕತ್ವವನ್ನು ಇಡೀ ಜಗತ್ತೇ ಒಪ್ಪಿಕೊಂಡಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಮೈಸೂರು ನಗರದ ಗಾಂಧಿ ಸ್ಕ್ವೇರ್ ನಲ್ಲಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು,ಗಾಂಧೀಜಿಯವರಲ್ಲಿದ್ದ ಅಹಿಂಸಾ ತತ್ವ, ಆಧ್ಯಾತ್ಮಿಕತೆ, ಪ್ರಾಮಾಣಿಕತೆ, ಶಿಸ್ತು ಮೊದಲಾದ ಗುಣಗಳು ಎಲ್ಲರನ್ನೂ ಪ್ರೇರೇಪಿಸುತ್ತಿದೆ. ಮಹಾತ್ಮ ಗಾಂಧೀಜಿಯವರ ವಿಚಾರಗಳು ಕೇವಲ ಭಾರತಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಅವಶ್ಯಕವಾಗಿವೆ ಎಂದರು.

ಗಾಂಧೀಜಿಯವರು ಸತ್ಯ, ಅಹಿಂಸೆಯ ಮಾರ್ಗವನ್ನೇ ಸ್ವಾತಂತ್ರ್ಯ ಚಳುವಳಿಗೆ ಅನುಸರಿಸಿದರು. ಅತ್ಯಂತ ಸರಳತೆಯ ಜೀವನ ನಡೆಸಿದರು. ಮಹಾತ್ಮ ಗಾಂಧಿಯವರ ವಿಚಾರಗಳು ಎಂದೆಂದಿಗೂ ಅಮರವಾಗಿರಲಿದೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಈ ದೇಶ ಕಂಡ ಸರಳ ಸಜ್ಜನಿಕೆಯ ಪ್ರಧಾನಿಯಾಗಿದ್ದರು. ರೈತ ಹಾಗೂ ಸೈನಿಕರಿಗಾಗಿ “ಜೈ ಜವಾನ್ ಜೈ ಕಿಸಾನ್” ಎಂಬ ಘೋಷಣೆ ನೀಡಿದ ದಕ್ಷ ಆಡಳಿತಗಾರರು. ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ತತ್ವವನ್ನು ನಿತ್ಯದ ಬದುಕಿನಲ್ಲಿ ಅಳವಡಿಕೊಳ್ಳುವುದು ಇಂದಿನ ಅಗತ್ಯಗಳಲ್ಲೊಂದಾಗಿದೆ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

02/10/2022 04:03 pm

Cinque Terre

12.99 K

Cinque Terre

0

ಸಂಬಂಧಿತ ಸುದ್ದಿ