ಮೈಸೂರು: ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿ ಒಡೆಯರ್ ಎಕ್ಸ್‌ಪ್ರೆಸ್ ಎಂದು ರೈಲ್ವೆ ಇಲಾಖೆ ಮರುನಾಮಕರಣ ಮಾಡಿದೆ. ತಾಳಗುಪ್ಪ-ಮೈಸೂರು ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿ ಕುವೆಂಪು ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.
ಟಿಪ್ಪು ಎಕ್ಸ್‌ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ಎಂದು ಹೆಸರಿಡುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿ ಮನವಿ ಮಾಡಿದ್ದರು. ಈ ಸಂಬಂಧ ಫೆಬ್ರವರಿ ತಿಂಗಳಲ್ಲಿ ದೆಹಲಿಯಲ್ಲಿ ಸಚಿವ ಅಶ್ವಿನಿ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿ ಲಿಖಿತ ಮನವಿ ಸಲ್ಲಿಸಿದ್ದರು. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್ ಎಂದು ಹೆಸರಿಡಲು ಒತ್ತಾಯ ಮಾಡಿದ್ದಾರೆ. ಸಂಸದರ ಮನವಿ ಮೇರೆ ಹೆಸರು ಬದಲಾಯಿಸಲಾಗಿದೆ.
PublicNext
08/10/2022 12:38 pm