ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರಥೋತ್ಸಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯದುವೀರ್ ಒಡೆಯರ್, ಟಿಪ್ಪು ಎಕ್ಸ್‌ಪ್ರೆಸ್ ಮರು ನಾಮಕರಣದ ಕುರಿತು ಮಾತನಾಡಿದರು. ಹತ್ತನೇ ಚಾಮರಾಜ ಒಡೆಯರ್ ಕಾಲದಿಂದಲೂ ರೈಲ್ವೆ ಅಭಿವೃದ್ಧಿಯಾಗಿದೆ. ಒಡೆಯರ್ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿರುವುದು ಸಂತೋಷದ ವಿಷಯ ಎಂದು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು.
ನಿನ್ನೆಯೇ ರೈಲುಗಳ ಮೇಲಿದ್ದ ಟಿಪ್ಪು ಎಕ್ಸ್‌ಪ್ರೆಸ್ ಹೆಸರು ಇರೋ ಫಲಕ ತೆಗೆದು ಒಡೆಯರ್ ಎಕ್ಸ್‌ಪ್ರೆಸ್ ಎಂದು ಹಾಕಲಾಗಿದೆ. ಈ ಫೋಟೋಗಳನ್ನು ಸಂಸದ ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
PublicNext
09/10/2022 12:06 pm