ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ

ಮೈಸೂರು : ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ಇಂದು ನಗರದ ನಾನಾ ಭಾಗಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.ಪುರಭವನದಲ್ಲಿ ನಿರ್ಮಾಣವಾಗುತ್ತಿರುವ ಬಹುಮಹಡಿ ಪಾರ್ಕಿಂಗ್ ಕಟ್ಟಡ, ಎನ್.ಎಸ್.ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣ, ಅಜೀಜ್ ಸೇಠ್ ಡಬಲ್ ರಸ್ತೆಯಲ್ಲಿ ಕೈಗೊಂಡಿರುವ ಕಾಮಗಾರಿ ವೀಕ್ಷಣೆ ಮಾಡಿದರು.

ಈ ವೇಳೆ ಮಾತನಾಡಿದ ಸಚಿವರು, ಬಹುಮಹಡಿ ಪಾರ್ಕಿಂಗ್ ಕಟ್ಟಡದ ಮೊದಲ ಮಹಡಿಯಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ. ದಸರಾ ಸಂದರ್ಭದಲ್ಲಿ ಪಾರ್ಕಿಂಗ್ ಸಮಸ್ಯೆ ನಿವಾರಿಸಲು ಮೊದಲ ಮಹಡಿಯಲ್ಲಿ ಉಚಿತ ಪಾರ್ಕಿಂಗ್ ಇರಲಿದೆ. ಡಿಸೆಂಬರ್ ವೇಳೆಗೆ ಕಟ್ಟಡ ನಿರ್ಮಾಣ ಕಾಮಗಾರಿ ಮುಕ್ತಾಯವಾಗಲಿದೆ ಎಂದರು.

Edited By : Nirmala Aralikatti
Kshetra Samachara

Kshetra Samachara

28/09/2022 02:14 pm

Cinque Terre

1.46 K

Cinque Terre

0