ಮೈಸೂರು: ಮೈಸೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಕರೆದಿದ್ದ ಮಹಜರು ಕಾರ್ಯಕ್ಕೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹಾಜರಾಗಿದ್ದಾರೆ. ಸಿಎಂ ಕುಟುಂಬದ ವಿರುದ್ಧ ಹಾಗೂ ಸಿಎಂ ಹಸ್ತಕ್ಷೇಪದ ಬಗ್ಗೆ ಧ್ವನಿ ಎತ್ತಿದ್ದ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಅಧಿಕಾರಿಗಳಿಗೆ ದಾಖಲೆ ಸಮೇತ ಮಾಹಿತಿ ಒದಗಿಸಿದರು.
ಈ ಸಂಬಂಧ ಇಂದು ಅಧಿಕಾರಿಗಳ ಬುಲಾವ್ ಸಂಬಂಧ ಭೇಟಿ ಕೊಟ್ಟು ಮಾಹಿತಿ ನೀಡಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಕಳ್ಳರೆಲ್ಲರೂ ಒಂದಾಗಿದ್ದಾರೆಂದು ಜಿ.ಟಿ. ದೇವೇಗೌಡರ ದಸರಾ ವೇದಿಕೆಯ ಭಾಷಣಕ್ಕೆ ಟಾಂಗ್ ನೀಡಿದ್ದಾರೆ.
ತಮ್ಮ ರಕ್ಷಣೆಗಾಗಿ ಒಂದು ಕೂಟವನ್ನು ರಚನೆ ಮಾಡಿಕೊಂಡಿದ್ದು, ದಸರಾದಂತಹ ನಾಡಹಬ್ಬದ ಕಾರ್ಯಕ್ರಮದಲ್ಲಿ ಆ ರೀತಿ ಮಾತನಾಡಿದ್ದು ತಪ್ಪು. ಮುಡಾದಲ್ಲಿ ಜಿ.ಟಿ. ದೇವೇಗೌಡರ ಅಕ್ರಮವಿರಬಹುದು. ಆ ಕಾರಣಕ್ಕೆ ಎಲ್ಲರೂ ಒಂದಾಗಿದ್ದಾರೆ. ಎಲ್ಲದರ ಬಗ್ಗೆಯೂ ಮಾಹಿತಿ ಕೊಟ್ಟಿದ್ದೇನೆ ಎಂದು ಲೋಕ ಅಧಿಕಾರಿಗಳ ಕಚೇರಿ ಬಳಿ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದ್ದಾರೆ.
PublicNext
04/10/2024 05:51 pm