ಮೈಸೂರು : ಡಾ.ಅಂಬೇಡ್ಕರ್ ರವರ ಕುರಿತು ಬಿಜೆಪಿಯವರದ್ದು ಅಗೌರವದ ಹೇಳಿಕೆ ಎಂದು ಸಿಎಂ ಸಿದ್ದರಾಮಯ್ಯನವ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ರವರ ಜಪ ಮಾಡಬಾರದೆಂದು ಹೇಳುವ ಕೇಂದ್ರ ಸಚಿವ ಅಮಿತ್ ಶಾ ಅವರು ದಲಿತರ ಮನೆಗಳಿಗೆ ಭೇಟಿ ನೀಡುತ್ತಿರೋದು ಬಿಜೆಪಿಯವರಿಗೆ ಅಂಬೇಡ್ಕರ್ ರವರ ಮೇಲಿನ ಅಗೌರವವನ್ನು ತೋರಿಸುತ್ತದೆ ಎಂದ್ರು.
ಕಾಂಗ್ರೆಸ್ ಪಕ್ಷದವರ ಕಾಲದಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಅವರೇ ರಚಿಸಿದ್ದರು. ವಾಜಪೇಯಿಯವರ ಸರ್ಕಾರವಿದ್ದ ಸಂದರ್ಭದಲ್ಲಿ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು. ಸಂವಿಧಾನ ಬದಲಾವಣೆಗಾಗಿಯೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಯ ಅನೇಕ ಸಚಿವರು ಹೇಳಿಕೆ ನೀಡಿದ್ದರು. ಆರ್‌ಎಸ್ಎಸ್‌ನ ಪ್ರಮುಖರು ಸಂವಿಧಾನವನ್ನು ವಿರೋಧಿಸಿದ್ದರು ಎಂದು ಕಿಡಿಕಾರಿದ್ರು.
PublicNext
10/01/2025 10:34 pm