", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/418299-1736529080-KANOONU.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SuryaMysore" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು : ನಕ್ಸಲಿಸಂ ಸಂಪೂರ್ಣ ತೊಡೆದು ಹಾಕುವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ...Read more" } ", "keywords": "Mysuru, Karnataka Government, Naxalism Eradication, CM Siddaramaiah, Anti Naxal Operations, Karnataka Politics, Naxal Menace, Government Initiatives, Law and Order, Mysore News.,Mysore,Politics,Law-and-Order", "url": "https://publicnext.com/article/nid/Mysore/Politics/Law-and-Order" }
ಮೈಸೂರು : ನಕ್ಸಲಿಸಂ ಸಂಪೂರ್ಣ ತೊಡೆದು ಹಾಕುವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವ್ರು, ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದ್ರು.
ಯಾವುದೇ ಹೋರಾಟಗಳು ಸಂವಿಧಾನತ್ಮಕವಾದ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ರವರೂ ಹೇಳಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದರು.
PublicNext
10/01/2025 10:41 pm