", "articleSection": "Politics,News,Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/416075_1736587993_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "9886395504" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನಂಜನಗೂಡು: ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ನಂಜನಗೂಡು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ನಗರದ ಅಂಬೇಡ್ಕರ್ ಭವನ ಆವರಣದಲ್ಲಿ ಜ.12ರಂದು...Read more" } ", "keywords": "Node,Mysore,Politics,News,Public-News", "url": "https://publicnext.com/article/nid/Mysore/Politics/News/Public-News" } ನಾಳೆ ನಂಜನಗೂಡಿನಲ್ಲಿ ಭೀಮಾ ಕೊರೆಗಾಂವ್ ಹಿನ್ನೆಲೆ - ಜನಜಾಗೃತಿ ಸಮಾವೇಶ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ನಂಜನಗೂಡಿನಲ್ಲಿ ಭೀಮಾ ಕೊರೆಗಾಂವ್ ಹಿನ್ನೆಲೆ - ಜನಜಾಗೃತಿ ಸಮಾವೇಶ

ನಂಜನಗೂಡು: ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ನಂಜನಗೂಡು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ನಗರದ ಅಂಬೇಡ್ಕರ್ ಭವನ ಆವರಣದಲ್ಲಿ ಜ.12ರಂದು ನಾಳೆ ಭಾನುವಾರ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಈ ಸಂಬಂಧ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲೇಶ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಅಂಬೇಡ್ಕರ್ ಅವರ ವಾಣಿಯಂತೆ ಕೋರೆಂಗಾವ್ ಸಂಭ್ರಮಾಚರಣೆಯನ್ನು ಭಾರತದ ಇತಿಹಾಸದಲ್ಲಿ ಅಳಿಸಲಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರು. ದಲಿತ ಸಂಘಟನೆಗಳ ಒಕ್ಕೂಟ 6 ವರ್ಷಗಳಿಂದ ಭೀಮಾ ಕೊರೆಗಾಂವ್ ವಿಜಯೋತ್ಸವ ಸಂಭ್ರಮಾಚರಣೆ ಸಂಬಂಧ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸಮಾವೇಶ ಮಾಡುತ್ತಿದೆ. ನಗರದ ಜೂನಿಯ‌ರ್ ಕಾಲೇಜು ಮೈದಾನದಿಂದ ಮೆರವಣಿಗೆ ಹೊರಟು, ನಗರದ ಪ್ರಮುಖ ಬೀದಿಗಳಲ್ಲಿ ಸಾಗಿಲಿದೆ. ಬಳಿಕ ಅಂಬೇಡ್ಕರ್ ಭವನದ ಆವರಣದಲ್ಲಿ ಜನ ಜಾಗೃತಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ದಸಂಸ ಸಂಚಾಲಕ ಮಲ್ಲೇಶ್ ತಿಳಿಸಿದರು.

ಈ ಸಂದರ್ಭದಲ್ಲಿ ಪುಟ್ಟಸ್ವಾಮಿ ದೇವರಸನಹಳ್ಳಿ, ಮಲ್ಲಹಳ್ಳಿ ನಾರಾಯಣ, ಕಾರ್ಯ ಬಸವಣ್ಣ, ಅಭಿನಾಗಭೂಷನ್, ಸುರೇಶ್ ಶಂಕರಪುರ, ಯಶವಂತ್ ಕುಮಾರ್, ಜೈಶಂಕರ್ ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

11/01/2025 03:03 pm

Cinque Terre

2.16 K

Cinque Terre

0