ಹಿಂದಿ ದಿವಸ್ ಆಚರಣೆ ವಿರೋಧಿಸಿ ಜೆಡಿಎಸ್ ನಗರ ಘಟಕದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ.
ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಯುತ್ತಿದ್ದು, ಬಲವಂತವಾಗಿ ಹಿಂದಿ ಏರಲು ಮುಂದಾದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಷ್ಟೇ ಅಲ್ಲದೆ ಕೂಡಲೇ ಹಿಂದಿ ದಿವಸ ಆಚರಣೆ ಆದೇಶ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ಇನ್ನು ಗಾಂಧಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ನಗರ ಜೆಡಿಎಸ್ ಘಟಕದ ಅಧ್ಯಕ್ಷ ಚಲುವೇಗೌಡ, ಮಾಜಿ ಮೇಯರ್ ಲಿಂಗಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
PublicNext
14/09/2022 02:40 pm