ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಸ್ ವಾಪಸ್ ಮಾಡಿದ ಬಿಜೆಪಿ ಶಾಸಕ!

ಮೈಸೂರು : ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿ ಇಂದು (ಬುಧವಾರ) ಸಂಜೆ ನಡೆಯಲಿದೆ. ದಸರಾ ಪಾಸ್ ಹಂಚಿಕೆಯಲ್ಲಿ ಗೊಂದಲ ಉಂಟಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ವಿರುದ್ಧ ಬಿಜೆಪಿಯ ಶಾಸಕರೇ ಅಸಮಾಧಾನಗೊಂಡಿದ್ದಾರೆ.ನಂಜನಗೂಡು ಕ್ಷೇತ್ರದ ಬಿಜೆಪಿ ಶಾಸಕ ಬಿ.ಹರ್ಷವರ್ಧನ್ ಉಸ್ತುವಾರಿ ಸಚಿವರ ಮೇಲೆ ಅಸಮಾಧಾನಗೊಂಡಿದ್ದಾರೆ. ತಡರಾತ್ರಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ದಸರಾ ಪಾಸ್ಗಳನ್ನು ವಾಪಸ್ ನೀಡಿದ್ದಾರೆ.

ಜಂಬೂ ಸವಾರಿ ವೀಕ್ಷಣೆಗೆ ಕೇವಲ 75 ಪಾಸ್ ನೀಡಲಾಗಿದೆ ಎಂಬುದು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ನೀಡಿರುವ ಪಾಸ್ ಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಶಾಸಕರು ಮರಳಿಸಿದ್ದಾರೆ.ದಸರಾ ಪಾಸ್ ಹಂಚಿಕೆ ಹಲವು ದಿನಗಳಿಂದ ಗೊಂದಲಕ್ಕೆ ಕಾರಣವಾಗಿದೆ. ಬಿಜೆಪಿಯ ಶಾಸಕರು ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಈಗ ಶಾಸಕರು ಪಾಸ್ ವಾಪಸ್ ಕೊಟ್ಟಿದ್ದಾರೆ.

ಮಂಗಳವಾರ ಸಂಜೆ ಶಾಸಕ ಹರ್ಷವರ್ಧನ್ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದರು. ಮುಖ್ಯಮಂತ್ರಿಗಳು ನಂಜನಗೂಡು ತಾಲ್ಲೂಕಿನಲ್ಲಿ ನಡೆದ ಗ್ರಾಮೀಣ ದಸರಾ ಕುರಿತು ಮಾಹಿತಿ ಕೇಳಿದ್ದರು. ಶಾಸಕರು ವಿವರಣೆ ನೀಡಿದ್ದರು.

Edited By : Nirmala Aralikatti
Kshetra Samachara

Kshetra Samachara

05/10/2022 12:24 pm

Cinque Terre

1.26 K

Cinque Terre

0