ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ದಸರಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಚಾಲನೆ

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನೋಡಿರದ ಗ್ರಾಮೀಣ ಜನತೆಗೆ ದಸರಾ ವೀಕ್ಷಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹಮ್ಮಿಕೊಂಡಿರುವ "ದಸರಾ ದರ್ಶನ" ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ಬಾವುಟ ತೋರುವ ಮೂಲಕ ಚಾಲನೆ ನೀಡಿದರು.

ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಮೈಸೂರು ಜಿಲ್ಲೆಯ 9 ತಾಲ್ಲೂಕಿನ ಮಹಿಳೆಯರು, ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಗ್ರಾಮೀಣ ಜನತೆಯನ್ನು ಕರೆತಂದು ದಸರಾವನ್ನು ದರ್ಶನ ಮಾಡಿಸುತ್ತಿರುವುದು ನಿಜಕ್ಕೂ ಉತ್ತಮ ಕಾರ್ಯ ಎಂದು ಹೇಳಿದರು.

ಇಂದಿನಿಂದ 3 ದಿನಗಳ ಕಾಲ ನಿಗಮದ 81 ವಾಹನಗಳಲ್ಲಿ ಸುಮಾರು 4455 ಜನತೆಯನ್ನು ಕರೆತಂದು ಅರಮನೆ, ಮೃಗಾಲಯ, ಜೆ.ಕೆ.ಗ್ರೌಂಡ್ಸ್ ನಲ್ಲಿ ನಡೆಯುವ ಮಹಿಳಾ ಮತ್ತು ಮಕ್ಕಳ ದಸರಾ ವೀಕ್ಷಿಸಲು ಮತ್ತು ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.

ದಸರಾ ಆಕರ್ಷಣೆಯಾದ ದೀಪಾಲಂಕಾರವನ್ನು ತೋರಿಸಿ ಪುನಃ ಮರಳಿ ಅವರವರ ತಾಲ್ಲೂಕುಗಳಿಗೆ ಮರಳಿ ಬಿಡಲಾಗುತ್ತದೆ ಎಂದರು.

Edited By :
PublicNext

PublicNext

28/09/2022 05:52 pm

Cinque Terre

23.33 K

Cinque Terre

0

ಸಂಬಂಧಿತ ಸುದ್ದಿ