ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಸಚಿವ ಎಸ್.ಟಿ.ಸೋಮಶೇಖರ್, ಹಾಗೂ ಬಿ.ಸಿ.ಪಾಟೀಲ್ ರಿಂದ ರೈತ ದಸರಾ ಉದ್ಘಾಟನೆ

ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ರೈತ ದಸರಾಗೆ ಚಾಲನೆ ನೀಡಿದರು.

ನಂದಿ ಪೂಜೆ ನೆರವೇರಿಸಿ, ಬಳಿಕ ನಗಾರಿ ಬಾರಿಸುವ ಮೂಲಕ ರೈತ ದಸರಾವನ್ನು ಉದ್ಘಾಟನೆ ಮಾಡಿ ನಂತರ ಸಚಿವರು ಎತ್ತಿನಗಾಡಿಯಲ್ಲಿ ಮೆರವಣಿಗೆಯಲ್ಲಿ ಸಾಗಿದರು.

ಪೂರ್ಣಕುಂಭ, ಗಿರಿಜನ ನೃತ್ಯ, ಕೀಲುಗೊಂಬೆ ಮಂಗಳವಾದ್ಯ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಪ್ರಕಾರದ ಜಾನಪದ ಕಲಾತಂಡಗಳು ಕೂಡ ಭವ್ಯ ಮೆರವಣಿಗೆಯಲ್ಲಿ ಭಾಗಿಯಾಗಿದ್ದವು.

ಈ ವೇಳೆ ಶಾಸಕರಾದ ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By :
PublicNext

PublicNext

30/09/2022 03:01 pm

Cinque Terre

24.7 K

Cinque Terre

0

ಸಂಬಂಧಿತ ಸುದ್ದಿ