ಸತತವಾಗಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಗ್ರಾಮಸ್ಥರು ಪರದಾಡುವ ಘಟನೆ ನಡೆದಿದೆ.
ವರುಣನ ಆರ್ಭಟಕ್ಕೆ ಹೆಚ್ಚು ಮನೆಗಳು ಮುಳುಗಡೆ ಆಗಿದ್ದು ಇದರಿಂದ ಗ್ರಾಮದ ಗ್ರಾಮಸ್ಥರು ರೊಚ್ಚಿಗೆದ್ದು ಗ್ರಾಮ ಪಂಚಾಯಿತಿಗೆ ಬೀಗ ಜೆಡಿದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಡೆಗೆ ಛೀಮಾರಿ ಹಾಕಿ ಪ್ರತಿಭಟನೆ ನಡಸಿದ್ದಾರೆ.
ವಾಟಾಳು ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯಿಂದಲೇ ಮನೆಗಳಿಗೆ ನೀರು ತುಂಬಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಎರಡು ಮನೆ ಕುಸಿತಗೊಂಡಿದ್ದು ಕುಟುಂಬಸ್ಥರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದು ಇಷ್ಷದರೂ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸದ ಅಧಿಕಾರಿಗಳ ನಡೆಗೆ ಗ್ರಾಮಸ್ಥರ ಬೇಸರ ವ್ಯಕ್ತಪಡಿಸಿದ್ದಾರೆ.
PublicNext
10/10/2022 06:14 pm