ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಶಾಲಾ ಮಕ್ಕಳ ಬಿಸಿಯೂಟ ಯೋಜನೆಯಲ್ಲೂ ಮೋಸ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಬಿಸಿಯೂಟದಲ್ಲಿ ಶಾಲಾ ಮಕ್ಕಳಿಗೆ ಮೋಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಜನ ಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ಎಂ.ವಿಜಯಕುಮಾರ್ ಒತ್ತಾಯ ಮಾಡಿದ್ದಾರೆ.

ನಂಜನಗೂಡು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಶಾಲೆಗಳಿಗೆ ಕೃಷಿ ಉತ್ಪನ್ನ ಮಾರುಕಟ್ಟೆಯ ಗೋಡಾನ್ ನಿಂದ ಆಹಾರ ಸರಬರಾಜಾಗುತ್ತದೆ. ಶಾಲೆಗಳಿಗೆ ತೆಗೆದುಕೊಂಡು ಹೋಗುತ್ತಿರುವ ಆಹಾರ ಪದಾರ್ಥಗಳಲ್ಲಿ ಕಡಿಮೆ ತೂಕ ಬರುತ್ತದೆ. ಶಾಲೆಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳಲ್ಲಿ ಸ್ಕೇಲ್ ಗಳಲ್ಲಿರುವ ತೂಕವನ್ನು ಮಾಡಿ ನೀಡಬೇಕು. ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ , ಮ್ಯಾನೇಜರ್ ಹಾಗೂ ಬಿಇಒ ಇದ್ರಲ್ಲಿ ಶಾಮೀಲಾಗಿದ್ದಾರೆ. ಕೊಟ್ಟಿರುವುದನ್ನು ಇಳಿಸಿಕೊಂಡು ಮುಖ್ಯ ಶಿಕ್ಷಕರು ಮೌನವಾಗಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದರು. ಕೂಡಲೇ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Edited By :
PublicNext

PublicNext

11/10/2022 01:06 pm

Cinque Terre

20.26 K

Cinque Terre

1