ಮೈಸೂರು : ಕೋವಿಡ್ ಕಾರಣದಿಂದ ಕಳೆದೆರಡು ವರ್ಷದಿಂದ ಅರಮನೆ ಅಂಗಳಕ್ಕೆ ಸೀಮಿತವಾಗಿದ್ದ ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಈ ಬಾರಿ ಅರಮನೆಯಿಂದ ವಿವಿಧ ಕಾಲಾ ತಂಡಗಳು ಹಾಗೂ ಸ್ತಬ್ಧ ಚಿತ್ರಗಳೊಂಡನೆ ವಿಜೃಂಭಣೆಯಿಂದ ಬನ್ನಿ ಮಂಟಪದವರೆಗೆ ನೆಡೆಯಲಿದೆ.
ಈ ವೇಳೆ ಯಾವುದೇ ಅಹಿತಕರ ಘಟನೆ ನೆಡೆಯದಂತೆ ಖಾಕಿ ಪಡೆ ಕಣ್ಗಾವಲಿರಿಸಿದ್ದು ಆಲ್ಬರ್ಟ್ ವಿಕ್ಟರ್ ರಸ್ತೆ, ನ್ಯೂ ಸಯ್ಯಾಜಿರಾವ್ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ರಾಜಪಥದ ಚಾಮರಾಜ ವೃತ್ತ, ಕೃಷ್ಣರಾಜ ವೃತ್ತ, ಸರ್ ಎಂ.ವಿಶ್ವೇಶ್ವರಯ್ಯ ವೃತ್ತಗಳಲ್ಲಿ ಸಾರ್ವಜನಿಕರು ರಸ್ತೆಗೆ ಇಳಿಯದಂತೆ ಬ್ಯಾರಿಕೇಡ್ ಕೋಟೆ ನಿರ್ಮಿಸಲಾಗಿದೆ.
ಮೆರವಣಿಗೆಯಲ್ಲಿ 47 ಸ್ತಬ್ಧಚಿತ್ರಗಳು, 50 ಕಲಾತಂಡಗಳು ಸೇರಿ ಒಟ್ಟು 120 ಪ್ರಕಾರಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ಚಿನ್ನದ ಅಂಬಾರಿಯಲ್ಲಿ ಕುಳಿತ ಚಾಮುಂಡೇಶ್ವರಿಯೇ ಸೆಂಟರ್ ಆಫ್ ಅಟ್ರಾಕ್ಷನ್ ಆಗಲಿದೆ.
PublicNext
05/10/2022 12:31 pm