ಮೈಸೂರು : ಕ್ರೀಡಾಪಟುಗಳಲ್ಲಿ ಶ್ರಮ, ಏಕಾಗ್ರತೆ, ಗುರಿ, ಗುಣಮಟ್ಟದ ತರಬೇತಿ ಸಿಕ್ಕಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಚಾಮುಂಡೇಶ್ವರಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು ದಸರಾ ವಿಶ್ವಖ್ಯಾತಿ ಪಡೆದಿರುವ ಉತ್ಸವ. ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಭೇಟಿ ನೀಡುತ್ತಾರೆ. ದಸರಾ ಉತ್ಸವದ ಅಂಗವಾಗಿ ಸಿಎಂ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ರೀಡೆಯಲ್ಲಿ ಪದಕ ಗೆಲ್ಲುವುದು ಒಂದು ಭಾಗವಾದರೆ, ಕ್ರೀಡೆಯಲ್ಲಿ ಭಾಗವಹಿಸುವುದೂ ಮುಖ್ಯ ಎಂದರು. ಇದೇವೇಳೆ, ಕ್ರೀಡಾಜ್ಯೋತಿ ಹಿಡಿದು ಸಿಎಂ ಕಪ್‌ಗೆ ಚಾಲನೆ ನೀಡಿ, ಅರಮಾನ್ ಪ್ರೀತ್ ಸಿಂಗ್ ಅವರಿಗೆ ಸನ್ಮಾನ ಮಾಡಿ ಗೌರವಿಸಿದರು. ಇದೇವೇಳೆ ಸಚಿವರು, ಶಾಸಕರು ಸೇರಿ ಅಧಿಕಾರಿಗಳು ಸಿಎಂಗೆ ಸಾಥ್ ನೀಡಿದ್ರು.
PublicNext
04/10/2024 02:16 pm