ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿರುವ ದಸರಾ ಕ್ರೀಡಾಕೂಟವನ್ನು ರೇಷ್ಮೆ, ಯುಚ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಉದ್ಘಾಟಿಸಿದರು. ಚಾಮುಂಡಿ ವಿಹಾರ್ ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಿಯೋ ಒಲಿಂಪಿಕ್ಸ್‌ನಾ ಕಂಚಿನ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದರು.
ದಸರಾ ಕ್ರೀಡಾಕೂಟ ಎಂಬುದು ಒಂದು ಪರಂಪರೆ. ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ರಾಜ್ಯದ ಕ್ರೀಡಾಪಟುಗಳಿಗೆ ಒಂದು ಹೆಮ್ಮೆಯ ವಿಚಾರ. ಬಾಕ್ಸಿಂಗ್, ಹಾಕಿ, ಕಬ್ಬಡಿ, ಟೆನ್ನಿಸ್, ಖೋ ಖೋ, ಬ್ಯಾಸ್ಕೆಟ್ ಬಾಲ್, ವಾಲಿಬಾಲ್, ಯೋಗ ಸೇರಿದಂತೆ ಒಟ್ಟು 27 ಕ್ರೀಡೆಗಳು ನಡೆಯಲಿದ್ದು, 4600 ಕ್ರೀಡಾ ಸ್ಪರ್ಧಿಗಳು, 800 ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 5400 ಕ್ಕೂ ಹೆಚ್ಚು ಜನರು ಈ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.
ರಾಜ್ಯದ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಬೇಕು. ಅದಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
Kshetra Samachara
05/10/2022 10:39 am