ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಕರಾವಳಿಯಲ್ಲಿ ರೆಡ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಸದ್ಯ ಮಳೆ ಅಬ್ಬರ ಹೆಚ್ಚಾಗಿದೆ ಕಳೆದ ನಾಲ್ಕೈದು ದಿನಗಳಿಂದ ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಹೀಗಾಗಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್, ಮಲೆನಾಡು, ಕೊಡಗು, ಉತ್ತರ ಕರ್ನಾಟಕದಲ್ಲಿ ಯಲೋ ಅಲರ್ಟ್ ಘೋಷಿಸಲಾಗಿದೆ.

ಕೊಡಗಿನಲ್ಲಿ ಇಂದು ಕೂಡ ಮಳೆ ಮುಂದುವರೆದಿದೆ.

ಇಂದಿನಿಂದ ಸೆ. 24ರವರೆಗೆ ಕರಾವಳಿ, ಶಿವಮೊಗ್ಗ, ಹಾಸನ, ಕೊಡಗು, ಯಾದಗಿರಿ, ರಾಯಚೂರು, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ.

Edited By : Nirmala Aralikatti
PublicNext

PublicNext

22/09/2020 09:03 am

Cinque Terre

52.47 K

Cinque Terre

0