ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 13ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಕೂಡ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಪರಿಣಾಮ ರಸ್ತೆಗಳು ಜಲಾವೃತಗೊಂಡು ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು.
PublicNext
11/10/2020 12:35 pm