ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವರುಣನ ಅಬ್ಬರ: ಕಾಂಪೌಂಡ್ ಕುಸಿದು 2 ತಿಂಗಳ ಕಂದಮ್ಮ ಸೇರಿ 9 ಮಂದಿ ದುರ್ಮರಣ

ಹೈದರಾಬಾದ್: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಒಡಿಶಾ ಸೇರಿದಂತೆ ದೇಶದ ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ಭಾರೀ ಮಳೆಯಿಂದಾಗಿ ಮಂಗಳವಾರ ರಾತ್ರಿ 10 ಮನೆಗಳ ಮೇಲೆ ಕಾಂಪೌಂಡ್ ಕುಸಿದ ಪರಿಣಾಮ 2 ತಿಂಗಳ ಕಂದಮ್ಮ ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಸಂಸದ ಎಐಎಂಐಎಂ ಪಕ್ಷದ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿ, ‘ಬಂಗ್ಲಗುಡದ ಮೊಹಮದೀಯ ಹಿಲ್ಸ್‌ ಸಮೀಪ ದುರಂತ ಸಂಭವಿಸಿದೆ. 9 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಾಯಗಳಾಗಿವೆ’ ಎಂದು ತಿಳಿಸಿದ್ದಾರೆ.

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಕಳೆದ 48 ಗಂಟೆಗಳಲ್ಲಿ ತೆಲಂಗಾಣದಲ್ಲಿ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Edited By : Vijay Kumar
PublicNext

PublicNext

14/10/2020 02:06 pm

Cinque Terre

50.53 K

Cinque Terre

0