ಹೈದರಾಬಾದ್: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಹದಗೆಟ್ಟು ಹೋಗಿದೆ.
ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಬುಧವಾರ ಸುರಿದ ಮಳೆಯಿಂದ ಸುಮಾರು 30 ಜನರು ಸಾವನ್ನಪ್ಪಿದ್ದಾರೆ.
ಭಾರೀ ಮಳೆಗೆ ಬಹುತೇಕ ನಗರಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನಿಂತ ಕಾರು, ಲಾರಿಗಳು ಮಳೆಯ ನೀರಿನಲ್ಲಿ ತೇಲಿಕೊಂಡು ಬರುತ್ತಿರುವ ವಿಡಿಯೋಗಳು ವೈರಲ್ ಆಗಿವೆ.
ಭಾರೀ ಮಳೆಯಿಂದಾಗಿ ತೆಲಂಗಾಣದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ.
ಹೈದರಾಬಾದ್ ಒಂದರಲ್ಲೇ ಮಳೆಯಿಂದ 18 ಜನರು ಸಾವನ್ನಪ್ಪಿದ್ದಾರೆ.. ಬುಧವಾರ ಹೈದರಾಬಾದ್ ನ ಬಂದ್ಲಗುಡ ಪ್ರದೇಶದಲ್ಲಿ ಮಗು ಸೇರಿದಂತೆ 9 ಮಂದಿ ಮೃತ ಪಟ್ಟಿದ್ದಾರೆ.
ಮನೆಗೆ ಬಿದ್ದ ಪರಿಣಾಮ ಮೂವರು ಗಾಯಗೊಂಡಿದ್ದರು. ಹೈದರಾಬಾದ್ನಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಮೂವರು ಮೃತಪಟ್ಟಿದ್ದರು. ತೆಲಂಗಾಣದಲ್ಲಿ ಇಂದು ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.
ತೆಲಂಗಾಣ ಮತ್ತು ಆಂಧ್ರ ಪ್ರದೇಶದ 80 ಸಾವಿರಕ್ಕೂ ಹೆಚ್ಚು ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ 30ಕ್ಕೂ ಹೆಚ್ಚು ಜನರು ಮಳೆಯಿಂದ ಸಾವನ್ನಪ್ಪಿದ್ದಾರೆ.
ಹೈದರಾಬಾದ್ ನಲ್ಲಿ ಅತಿಹೆಚ್ಚು ಜನರು ಮೃತಪಟ್ಟಿದ್ದಾರೆ.
PublicNext
15/10/2020 09:13 am