ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಸೊನ್ನ ಭೀಮಾ ಬ್ಯಾರೇಜ್‌ನಿಂದ 7.80 ಲಕ್ಷ‌ ಕ್ಯುಸೆಕ್ ‌ನೀರು ಬಿಡುಗಡೆ

ಕಲಬುರಗಿ: ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 5.30ರಿಂದ ದಾಖಲೆಯ 7.80 ಲಕ್ಷ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ.

ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದರಿಂದ ಅಫಜಲಪುರ, ಜೇವರ್ಗಿ, ಕಲಬುರ್ಗಿ, ಚಿತ್ತಾಪುರ, ಶಹಾಬಾದ್ ಹಾಗೂ ಸೇಡಂ ತಾಲೂಕಿನ 157 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯಗಳಿಂದ 8 ಲಕ್ಷ ಕ್ಯುಸೆಕ್ ನೀರನ್ನು ‌ಹರಿಸಲಾಗುತ್ತಿದ್ದು, ಅಷ್ಟೇ ಪ್ರಮಾಣದ ನೀರು ಸೊನ್ನ ಭೀಮಾ ಬ್ಯಾರೇಜ್ ಈಗಾಗಲೇ ಭರ್ತಿಯಾಗಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಬೇಕಾಗಿದೆ.

Edited By : Vijay Kumar
PublicNext

PublicNext

17/10/2020 08:11 am

Cinque Terre

48.33 K

Cinque Terre

0

ಸಂಬಂಧಿತ ಸುದ್ದಿ