ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ : ಅ.19ರಿಂದ ಮತ್ತೆ ವಾಯುಭಾರ ಕುಸಿತ, ಭಾರೀ ಮಳೆ ಸಾಧ್ಯತೆ

ಈಗಾಗಲೇ ಆಕಾಶಕ್ಕೆ ತೂತು ಬಿದ್ದಂತೆ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ತೆಲಂಗಾಣ, ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಮಳೆ ಮುಂದುವರೆಯಲಿದೆ.

ಅ.19ರಿಂದ ಮತ್ತೊಂದು ಹಂತದ ವಾಯುಭಾರ ಕುಸಿತ ಸಂಭವಿಸಲಿದ್ದು, ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೂಡ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇದೆ.

ಅ.20 ಮತ್ತು 21ರಂದು ಉತ್ತರ ಒಳನಾಡಿನಲ್ಲಿ ಹಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೀದರ್, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ, ಕಲ್ಬುರ್ಗಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ.

Edited By : Nirmala Aralikatti
PublicNext

PublicNext

17/10/2020 08:19 pm

Cinque Terre

73.09 K

Cinque Terre

0