ಮಂಗಳೂರು- ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಮಂಗಳೂರಿನ ಪಚ್ಚನಾಡಿ ಹಾಗೂ ಕುಡುಪು ಗ್ರಾಮಗಳ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಭೂ ಕುಸಿತ ಉಂಟಾಗಿತ್ತು. ಈ ಹಿನ್ನಲೆಯ ರಾಜ್ಯ ಸರ್ಕಾರ ಮತ್ತೊಂದು ಹಂತದ ಪರಿಹಾರ ಘೋಷಣೆ ಮಾಡಿದೆ. ಭೂ ಕುಸಿತದಲ್ಲಿ ಸಂತ್ರಸ್ತರಾದವರಿಗೆ 14 ಕೋಟಿ ಪರಿಹಾರ ಬಿಡುಗಡೆಯಾಗಿದೆ.
ನಗರಾಭಿವೃದ್ಧಿ ಇಲಾಖೆಯು ಈ ಮೊತ್ತವನ್ನು ಮಂಗಳೂರು ಮಹಾನಗರ ಪಾಲಿಕೆಗೆ ನೀಡಿದೆ. ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಅಂದಾಜು 20 ಕೋಟಿ ಪರಿಹಾರ ನೀಡುವಂತೆ ಮಂಗಳೂರು ಮಹಾನಗರ ಪಾಲಿಕೆ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಹಣಕಾಸು ಆಯೋಗದ 2019-20 ನೇ ಸಾಲಿನ ವಿಶೇಷ ಅನುದಾನದಿಂದ ಇದಕ್ಕೂ ಮುನ್ನ 8 ಕೋಟಿ ಪರಿಹಾರ ಘೋಷಿಸಲಾಗಿತ್ತು. ಎರಡನೇ ಹಂತದಲ್ಲಿ 14 ಕೋಟಿ ಪರಿಹಾರ ಮೊತ್ತ ನೀಡಲಾಗಿದೆ.
PublicNext
22/10/2020 03:31 pm