ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಂಜೆ ವರಣು ಅಬ್ಬರಿಸಿದ್ದಾನೆ. ಪರಿಣಾಮ ಬೆಂಗಳೂರಿನ ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ರಸ್ತೆಗಳ ಮೇಲೆ ನದಿಯಂತೆ ನೀರು ಹರಿದಿದೆ.
ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ, ಪೀಣ್ಯ, ಕುಮಾರಸ್ವಾಮಿ ಲೇಔಟ್, ಬನಶಂಕರಿ, ಜಾಲಹಳ್ಳಿ, ಬಸವೇಶ್ವರ ನಗರ, ಮೆಜೆಸ್ಟಿಕ್, ಮಾಗಡಿ ರಸ್ತೆ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ಇದರಿಂದಾಗಿ ಕೆಳ ಸೇತುವೆಗಳಲ್ಲಿ ಸಾಕಷ್ಟು ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಸವಾರರು ಪರದಾಡುತ್ತಿದ್ದಾರೆ.
PublicNext
23/10/2020 07:45 pm