ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಚ್ಚರಿಕೆ: ರಾಜಧಾನಿಯಲ್ಲಿ ನಾಳೆಯೂ ಮಹಾಮಳೆ- ಕರಾವಳಿಯ ಎಲ್ಲ ಜಿಲ್ಲೆಗೂ ತಟ್ಟಲಿದೆ ಅಬ್ಬರ

ಬೆಂಗಳೂರು: ನಾಳೆಯೂ ಬೆಂಗಳೂರಿನಲ್ಲಿ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಂಜೆ ವರಣ ಅಬ್ಬರಿಸಿದ್ದಾನೆ. ಪರಿಣಾಮ ಬೆಂಗಳೂರಿನ ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ರಸ್ತೆಗಳ ಮೇಲೆ ನದಿಯಂತೆ ನೀರು ಹರಿದಿದೆ. ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ, ಪೀಣ್ಯ, ಕುಮಾರಸ್ವಾಮಿ ಲೇಔಟ್‌, ಬನಶಂಕರಿ, ಜಾಲಹಳ್ಳಿ, ಬಸವೇಶ್ವರ ನಗರ, ಮೆಜೆಸ್ಟಿಕ್, ಮಾಗಡಿ ರಸ್ತೆ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ನಾಳೆಯೂ ಮಳೆ ಮುಂದುವರಿಯುವ ಕಾರಣದಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್, ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 23ರಿಂದ 25ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಕ್ಟೋಬರ್ 26ರಂದು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 24ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುತ್ತದೆ. ಜೊತೆಗೆ ನಾಳೆಯೂ ಬೆಂಗಳೂರಿನಲ್ಲಿ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

23/10/2020 08:13 pm

Cinque Terre

54.33 K

Cinque Terre

1

ಸಂಬಂಧಿತ ಸುದ್ದಿ