ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅ. 27ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಹೆಚ್ಚಾಗಿದೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 25ರಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

25 ಮತ್ತು 26ರಂದು ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಅ. 26ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಅಕ್ಟೋಬರ್ 27, 28ರಂದು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.

ಹಾವೇರಿ ಗದಗ ಜಿಲ್ಲೆ ದಕ್ಷಿಣ ಒಳನಾಡಿನಲ್ಲಿ 25 ಮತ್ತು 26ರಂದು ಮಳೆಯಾಗುವ ನಿರೀಕ್ಷೆಯಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಅ. 27ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Edited By : Nirmala Aralikatti
PublicNext

PublicNext

24/10/2020 06:42 pm

Cinque Terre

62.64 K

Cinque Terre

0