ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಪರಿಹಾರ ಘೋಷಿಸಿದ ಪ್ರಧಾನಿ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ನಿಜಕ್ಕೂ ದುಃಖಕರ ಸಂಗತಿ, ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಆಶಿಸಿರುವ ಪ್ರಧಾನಿ ಮೋದಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ಇನ್ನೂ ಅವಶೇಷಗಳಡಿಯಲ್ಲಿ ಹಲವರು ಸಿಕ್ಕಿಹಾಕಿಕೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

Edited By : Nirmala Aralikatti
PublicNext

PublicNext

12/08/2021 09:45 am

Cinque Terre

60.46 K

Cinque Terre

2

ಸಂಬಂಧಿತ ಸುದ್ದಿ