ಶಿಮ್ಲಾ : ಹಿಮಾಚಲ ಪ್ರದೇಶದ ಕಿನೌರ್ ನಲ್ಲಿ ಕಳೆದ ಬುಧವಾರ ಮಧ್ಯಾಹ್ನ ಸಂಭವಿಸಿದ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದೆ. ಸದ್ಯ ನಾಲ್ಕನೇ ದಿನಕ್ಕೆ ರಕ್ಷಣಾ ಕಾರ್ಯಾಚರಣೆ ಕಾಲಿಟ್ಟಿದ್ದು, ಶನಿವಾರ ಮತ್ತೆ ಆರು ಶವಗಳು ಪತ್ತೆಯಾಗಿವೆ. ಇದರೊಂದಿಗೆ ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
'ಚೌರಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ 5 ರಲ್ಲಿ ಆರು ಶವಗಳು ಸಿಕ್ಕಿವೆ. ಇನ್ನುಳಿದ 9 ಮಂದಿಗಾಗಿ ಶೋಧ ಮುಂದುವರಿದಿದೆ' ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕದ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಮಾಹಿತಿ ನೀಡಿದರು. 'ಈ ಪ್ರದೇಶದಲ್ಲಿ ಭೂ ಕುಸಿತದ ಪರಿಣಾಮವಾಗಿ ಈಗಲೂ ಬಂಡೆಗಳು ಉರುಳುತ್ತಿವೆ. ಹಾಗಾಗಿ ಸಾರ್ವಜನಿಕರ ಸುರಕ್ಷತೆಗಾಗಿ ಈ ಪ್ರದೇಶದಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 9ವರೆಗೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
PublicNext
14/08/2021 04:46 pm