ಹಿರಿಯೂರು : ಕಳೆದ ಮುರ್ನಾಲ್ಕು ದಿನಗಳಿಂದ ಸುರಿದ ಜಿಟಿ ಜಿಟಿ ಮಳೆಗೆ ಮನೆ ಗೋಡೆ ಕುಸಿದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕಾರೋಬನಹಟ್ಟಿ ಗ್ರಾಮದಲ್ಲಿ ನಡೆದಿದೆ.
ಚೆನ್ನಕೇಶವ (26), ಸೌಮ್ಯ (20) ಮೃತಪಟ್ಟಿರುವ ದುರ್ದೈವಿಗಳು. ಕ್ಯಾತಣ್ಣ (55) ಎಂಬುವವರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಐಮಂಗಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
PublicNext
14/11/2021 09:52 am