ದಾವಣಗೆರೆ: ದಾವಣಗೆರೆ ಜಿಲ್ಲೆಯ ಕೆಲವೆಡೆ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಬಿರುಗಾಳಿಗೆ ರಸ್ತೆ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ.
ಮರ ಉರುಳಿ ಬಿದ್ದ ಪರಿಣಾಮ ಒಂದು ಟಾಟಾ ಏಸ್ ವಾಹನ ಜಖಂಗೊಂಡ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ನಡೆದಿದೆ. ನಾಲ್ಕು ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು ಭಾರೀ ಅನಾಹುತ ತಪ್ಪಿದಂತಾಗಿದೆ. ಮಳೆ ಬಿರುಗಾಳಿಗೆ ಜನರು ಮನೆ ಸೇರಿದ್ದರಿಂದ ಅನಾಹುತ ಸಂಭವಿಸಿಲ್ಲ.
ಅಂದಾಜು ನಷ್ಟ ಎಷ್ಟು...?
ಚನ್ನಗಿರಿ 14.0 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 6.0 ಮೀ.ಮಿ, ಹರಿಹರದಲ್ಲಿ 11.0 ಮಿ.ಮೀ, ಹೊನ್ನಾಳಿ 14.0 ಮಿ.ಮೀ ಮಳೆಯಾಗಿದೆ. ಜಗಳೂರು 2.0 ಮಿ.ಮೀ, ನ್ಯಾಮತಿಯಲ್ಲಿ 26.0 ಮಿ.ಮೀ ಮಳೆಯಾಗಿದೆ. ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 2 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.0.60 ಲಕ್ಷ ಮತ್ತು 4 ಎಕರೆ ಬಾಳೆಬೆಳೆ ಹಾನಿಯಾಗಿದ್ದು, ರೂ.0.70 ಲಕ್ಷ.ಅಂದಾಜು ನಷ್ಟ ಸಂಭವಿಸಿರುತ್ತದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 3 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.0.90 ಲಕ್ಷ ಮತ್ತು 4 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ.0.30 ಲಕ್ಷ ಅಂದಾಜು ನಷ್ಟ ಸಂಭವಿಸುತ್ತದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1.20 ಎಕರೆ ಮೆಕ್ಕೆಜೋಳದ ಬೆಳೆ ಹಾನಿಯಾಗಿದ್ದು, ರೂ.0.70 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಒಟ್ಟು ರೂ.3.20 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
PublicNext
06/05/2022 12:03 pm