ಚೆನ್ನೈ: ಹೆಣ್ಣು ಕಾಡಾನೆಯೊಂದು ಅರಣ್ಯ ವೀಕ್ಷಕನ ಮೇಲೆ ದಾಳಿ ಮಾಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ತಿತಿಪಾಳ್ಯಂ ಗ್ರಾಮದಲ್ಲಿ ನಡೆದಿದೆ. ಈ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಪಟಾಕಿ ಸಿಡಿಸಿ ಆನೆಗಳನ್ನು ಕಾಡಿಗೆ ಓಡಿಸುತ್ತಿದ್ದ ಸಮಯದಲ್ಲಿ ಹೆಣ್ಣಾನೆಯೊಂದು ಹಿಂಡಿನಿಂದ ಬೇರ್ಪಟ್ಟಿತ್ತು. ಅಷ್ಟೇ ಅಲ್ಲದೆ ಗ್ರಾಮದಲ್ಲಿ ಸುತ್ತಾಡಿ ಭಯದ ವಾತಾವರಣ ಸೃಷ್ಟಿಸಿತ್ತು. ಈ ವೇಳೆ ಅರಣ್ಯ ವೀಕ್ಷಕನ ಮೇಲೆಯೇ ದಾಳಿ ನಡೆಸಿ ತನ್ನ ಕೌರ್ಯ ಹೊರ ಹಾಕಿದೆ. ಈ ಎಲ್ಲ ದೃಶ್ಯವನ್ನು ವ್ಯಕ್ತಿಯೊಬ್ಬರು ತಮ್ಮ ಮನೆಯ ಟೇರಸ್ ಮೇಲೆ ನಿಂತು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಅಷ್ಟೇ ಅಲ್ಲ ಅರಣ್ಯ ವೀಕ್ಷಕನ ಮೇಲೆ ದಾಳಿ ಮಾಡುತ್ತಿದ್ದ ಆನೆಯನ್ನು ಹಿಮ್ಮೆಟ್ಟಿಸುವಲ್ಲಿ ಸಹಾಯ ಮಾಡಿದ್ದಾರೆ.
ಆನೆ ದಾಳಿಯಿಂದ ಅರಣ್ಯ ವೀಕ್ಷಕನಿಗೆ ಗಾಯಗಳಾಗಿದ್ದು, ಕೊಯಮತ್ತೂರಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಆನೆಗಳನ್ನು ಕಾಡಿಗೆ ಕಳುಹಿಸುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಮುನ್ನಡೆಸಿದೆ.
PublicNext
15/06/2022 04:22 pm