ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ನೀರಲ್ಲಿ ಕೊಚ್ಚಿಹೋದ ವೃದ್ಧೆ ಸಾವು

ಕೊರಟಗೆರೆ: ಸತತವಾಗಿ ಸುರಿಯುತ್ತಿರುವ ರಣಮಳೆಯ ಪರಿಣಾಮ ವಯೋವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ

ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋಗಿ ರೈತ ಮಹಿಳೆ ಶವವಾಗಿ ಪತ್ತೆಯಾಗಿದ್ದು ಹೊಲದಲ್ಲಿ ಕೆಲಸ ಮಾಡಲು ಹೋಗಿದ್ದಾಗ ಘಟನೆ ಸಂಭವಿಸಿದೆ. ತಾಲೂಕಿನ ಕಸಬಾ ಹೋಬಳಿಯ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಡಗಾನಹಳ್ಳಿ ಹುಂಜಿನಹಳ್ಳದಲ್ಲಿ ಘಟನೆ ನಡೆದಿದೆ.

ಲಕ್ಷ್ಮಮ್ಮ (70) ನೀರಲ್ಲಿ ಕೊಚ್ಚಿ ಹೋಗಿ ಮೃತ ಪಟ್ಟಿರೋ ರೈತ ಮಹಿಳೆಯಾಗಿದ್ದು, ಕುರುಡುಗಾನಹಳ್ಳಿ ಗ್ರಾಮದಲ್ಲಿ ವಾಸವಿದ್ದ ಮಹಿಳೆ ಗುರುವಾರ ಮಧ್ಯಾಹ್ನ ಜಮೀನಿ ನಿಂದ ಮನೆಗೆ ಬರುವಾಗ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದು, ಸ್ಥಳೀಯರು ಶವವನ್ನ ಹುಡುಕಿ ಹೊರ ತಂದಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕೊರಟಗೆರೆ ಪೊಲೀಸರು ಮತ್ತು ಕೊರಟಗೆರೆ ತಹಶಿಲ್ದಾರ್ ನಹೀದಾ ಜಂಜಂ, ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಶೀಲ್ದಾರ್ ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರದ ಚೆಕ್ ವಿತರಿಸುವುದಾಗಿ ಹೇಳಿದ್ದಾರೆ.

Edited By : Manjunath H D
PublicNext

PublicNext

04/08/2022 08:38 pm

Cinque Terre

26.9 K

Cinque Terre

0

ಸಂಬಂಧಿತ ಸುದ್ದಿ