ಕೊರಟಗೆರೆ: ಟಾಟಾ ಏಸ್ ಸಮೇತ ಚಾಲಕ ನದಿಯಲ್ಲಿ ಸೋಮವಾರ ಕೊಚ್ಚಿ ಹೋಗಿದ್ದ ಹಿನ್ನೆಲೆ ಸತತ 24 ಗಂಟೆಯಿಂದ ಸ್ಥಳದಲ್ಲೇ ಬೀಡುಬಿಟ್ಟ ಅಗ್ನಿಶಾಮಕ ಸಿಬ್ಬಂದಿ ಮಂಗಳವಾರ ಮೃತ ತಿಮ್ಮರಾಜು (35) ಚಾಲಕನ ಶವ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಪ್ಪನಹಳ್ಳಿ ಗ್ರಾಮದ ಜಯಮಂಗಲಿ ನದಿಯಲ್ಲಿ ಟಾಟಾ ಏಸ್ ಜೊತೆಯಲ್ಲಿ ಚಾಲಕ ಕೊಚ್ಚಿಹೋಗಿದ್ದ ಹಿನ್ನೆಲೆಯಲ್ಲಿ ಸೋಮವಾರ ಅಗ್ನಿಶಾಮಕ ಸಿಬ್ಬಂದಿ ಜತೆ ಸಾಥ್ ಕೊಟ್ಟ ಕೊರಟಗೆರೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಶವ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಮತ್ತು ಕೊರಟಗೆರೆ ತಹಶೀಲ್ದಾರ್ ನಹಿದಾ ಜಂ ಜಂ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
-ರಾಘವೇಂದ್ರ ದಾಸರಹಳ್ಳಿ,ಪಬ್ಲಿಕ್ ನೆಕ್ಸ್ಟ್,ತುಮಕೂರು
PublicNext
07/09/2022 12:41 pm