ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಹೊಲದಲ್ಲಿಯೇ ಕೊಳೆಯುತ್ತಿರುವ ಮೆಕ್ಕೆಜೋಳ: ಕಂಗಾಲಾದ ರೈತ

ಗದಗ: ಒಂದು ವಾರದಿಂದ ಗದಗ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳಲ್ಲಿ ಸುರಿಯುತ್ತಿರುವ ಜಿಟಿಜಿಟಿ ಮಳೆ ಮತ್ತು ದಟ್ಟ ಮೋಡ ಕವಿದ ವಾತಾವರಣದಿಂದ ಹೆಸರು,ಅಲಸಂದೆ, ಉದ್ದು, ತೊಗರಿ ಬೆಳೆದ ರೈತರ ಬದುಕು ದುಸ್ತರಗೊಂಡಿದೆ.

ಸತತ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಸುಮಾರು 300 ಎಕರೆ ಪ್ರದೇಶದಲ್ಲಿ ಮಳೆಯ ನೀರು ನಿಂತು ರೈತರು ಬೆಳೆದ ಮೆಕ್ಕೆಜೋಳ ಕೊಳೆಯುವ ಸ್ಥಿತಿಗೆ ಬಂದಿದೆ. ಇದ್ರಿಂದ ರೈತರು ಕಂಗಾಲಾಗಿದ್ದಾರೆ. ಹಾಗೇ ಸಂಬಂಧಪಟ್ಟ ಅಧಿಕಾರಿಗಳು ಬಂದು ನೋಡುತ್ತಿಲ್ಲ ಎಂದು ರೈತರು ತಮ್ಮ ಆಕ್ರೋಶ ಹೊರ ಹಾಕುತ್ತಿದ್ದಾರೆ..

ಈ ವರ್ಷ ಉತ್ತಮ ಮುಂಗಾರು ಆರಂಭವಾಗಿದ್ದರಿಂದ ಖುಷಿಯಲ್ಲಿದ್ದ ರೈತರು ಅಲ್ಪಾವಧಿ ಬೆಳೆ ಹೆಸರು, ಮೆಕ್ಕೆಜೋಳ, ಅಲಸಂದೆ, ಉದ್ದು ಹೆಚ್ಚು ಬಿತ್ತನೆ ಮಾಡಿದ್ದರು. ಆರಂಭದಲ್ಲಿ ಫಸಲು ಸಹ ನಳನಳಿಸುತ್ತಿತ್ತು. ಇನ್ನೊಂದು ವಾರ ಇದೇ ರೀತಿ ಜಿಟಿಜಿಟಿ ಮಳೆಯಾದರೆ ಸಂಪೂರ್ಣ ಬೆಳೆ ಹಾನಿಯಾಗಲಿದೆ ಅಂತ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

Edited By : Manjunath H D
PublicNext

PublicNext

02/08/2022 09:03 pm

Cinque Terre

27.63 K

Cinque Terre

2