ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಈ ಬಾರಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಸಿಡಿಸಲು ಸರ್ಕಾರ ಅನುಮತಿ ನೀಡಿದೆ. ಪರಿಸರ ಮಾಲಿನ್ಯ ನಿಯಂತ್ರಣ, ಕೋವಿಡ್ ಸೋಂಕಿತರ ಆರೋಗ್ಯ ಕಾಳಜಿ ದೃಷ್ಟಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಏನಿದು ಹಸಿರು ಪಟಾಕಿ? ಪತ್ತೆ ಹಚ್ಚುವುದು ಹೇಗೆ ಗೊತ್ತಾ? ಹಸಿರು ಪಟಾಕಿಯನ್ನು NEERI ಲ್ಯಾಬ್ ಫಾರ್ಮುಲಾದ ಪ್ರಕಾರ ತಯಾರಿಸಲಾಗುತ್ತದೆ. ಇದಕ್ಕೆ ಪೆಟ್ರೋಲಿಯಂ ಆ್ಯಂಡ್ ಎಕ್ಸ್ಪ್ಲೋಸಿವ್ ಸೇಫ್ಟಿ ಆರ್ಗನೈಸೇಷನ್ ಪ್ರಮಾಣೀಕರಣ ನೀಡಿದೆ. ಗ್ರಾಹಕರು ಹಸಿರು ಪಟಾಕಿ ಖರೀದಿಸುವಾಗ ಎಚ್ಚರಿಕೆ ವಹಿಸಬೇಕು.
ಹಸಿರು ಪಟಾಕಿ ಬಾಕ್ಸ್ ಮೇಲೆ NEERI ಮತ್ತು PESO ಲಾಂಛನ ಇರುತ್ತದೆ. ನಿಮ್ಮ ಮೊಬೈಲ್ನಿಂದ ಪಟಾಕಿ ಬಾಕ್ಸ್ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಪರೀಕ್ಷಿಸಬಹುದು. CSIR ಮತ್ತು NEERI ಸಂಶೋಧನಾ ಸಂಸ್ಥೆಗಳು ಜಂಟಿಯಾಗಿ ಹಸಿರು ಪಟಾಕಿಯನ್ನು ಅಭಿವೃದ್ದಿ ಪಡಿಸಿವೆ. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ 2018ರಲ್ಲಿ ಹಸಿರು ಪಟಾಕಿಗಳನ್ನು ಅಭಿವೃದ್ಧಿ ಮಾಡಲಾಯಿತು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
PublicNext
13/11/2020 08:46 pm