ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿವಾರ್​ ಚಂಡಮಾರುತ ಎಫೆಕ್ಟ್‌: ರಾಜ್ಯದಲ್ಲಿ ಮತ್ತೆ 2 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ನಿವಾರ್​ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮತ್ತೆ 2 ದಿನ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನಾಳೆ (ಮಂಗಳವಾರ) ತಮಿಳುನಾಡಿನ ಕೆಲ ಭಾಗಗಳಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಇದರಿಂದಾಗಿ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನವೆಂಬರ್‌ 24 ಮತ್ತು 25ರಂದು ಸಾಧಾರಣ ಮಳೆಯಾದರೆ ನ.26 ಮತ್ತು 27ರಂದು ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ಘೋಷಿಸಲಾಗಿದೆ.

Edited By : Vijay Kumar
PublicNext

PublicNext

23/11/2020 07:55 pm

Cinque Terre

93.68 K

Cinque Terre

1

ಸಂಬಂಧಿತ ಸುದ್ದಿ