ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಸೇರಿ ದಕ್ಷಿಣ ಭಾರತದ ವಿವಿಧೆಡೆ ಮತ್ತೆರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ವಿವಿಧೆಡೆ ಮತ್ತೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಂದು ತಿಳಿಸಿದೆ.

ನಿವಾರ್ ಚಂಡಮಾರುತದ ಬೆನ್ನಲ್ಲೇ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 1ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ನವೆಂಬರ್‌ 29ರವರೆಗೆ ಮಳೆಯಾಗಲಿದ್ದು, ನವೆಂಬರ್ 30 ಮತ್ತು ಡಿ.1ರಂದು ಒಣಹವೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.

ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಹೇ, ಲಕ್ಷದ್ವೀಪ, ದಕ್ಷಿಣ ಕರಾವಳಿ ಆಂಧ್ರ ಪ್ರದೇಶ ಮತ್ತು ದಕ್ಷಿಣ ರಾಯಲಸೀಮಗಳಲ್ಲಿ ಮಂಗಳವಾರ ಮತ್ತು ಬುಧವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Edited By : Vijay Kumar
PublicNext

PublicNext

28/11/2020 07:38 pm

Cinque Terre

56.9 K

Cinque Terre

0

ಸಂಬಂಧಿತ ಸುದ್ದಿ