ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳಿಯಿಂದ ಗಡಗಡ ನಡುಗಿದ ರಾಜ್ಯ : ಇನ್ನು 3 ದಿನ ಭಾರಿ ಚಳಿ

ಬೆಂಗಳೂರು: ನಿವಾರ್ ಚಂಡಮಾರುತದ ಪರಿಣಾಮ ತಾಪಮಾನದಲ್ಲಿ ಏರಿಳಿತವಾಗಿದೆ ಇದರಿಂದಾಗಿ ಚಳಿಯ ತೀವ್ರತೆ ಹೆಚ್ಚಾಗಿದೆ.

ಇನ್ನು ಮೂರು ದಿನಗಳ ಕಾಲ ಚಳಿ ಬಾಧಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಯಚೂರು, ಕೊಪ್ಪಳ, ಹಾವೇರಿ, ಕಲಬುರ್ಗಿ, ಬೀದರ್, ವಿಜಯಪುರ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಸುಮಾರು 6 ಡಿಗ್ರಿ ಸೆಲ್ಸಿಯಸ್ ವರೆಗೂ ಇಳಿಕೆಯಾಗಿದೆ.

ಅದೇ ರೀತಿ ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಭಾಗದಲ್ಲಿ 3 ಡಿಗ್ರಿಯಷ್ಟು ಉಷ್ಣಾಂಶ ಕಡಿಮೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಕೂಡ ತಾಪಮಾನ ಕಡಿಮೆಯಾಗಿ ಚಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.

ಮೋಡ ಕವಿದ ವಾತಾವರಣ, ಉಷ್ಣಾಂಶದಲ್ಲಿ ಇಳಿಕೆ, ಹೆಚ್ಚುತ್ತಿರುವ ಗಾಳಿ ಆರ್ಭಟ ಈ ಎಲ್ಲ ಪರಿಣಾಮ ವಾತಾವರಣವನ್ನು ಥಂಡಿಗೊಳಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ.

ಶನಿವಾರವೂ ರಾಜ್ಯದ ವಿವಿಧೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಿದೆ. ನ.29ರಿಂದ ಮುಂದಿನ 2 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Edited By : Nirmala Aralikatti
PublicNext

PublicNext

29/11/2020 08:27 am

Cinque Terre

63.06 K

Cinque Terre

3

ಸಂಬಂಧಿತ ಸುದ್ದಿ