ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪನದಲ್ಲಿ 2.7 ತೀವ್ರತೆ ದಾಖಲಾಗಿದೆ.
ಇಂದು ಘಾಜಿಯಬಾದ್ ನಲ್ಲಿ ಲಘು ಭೂಕಂಪನವಾಗಿದೆ.
ಕಳೆದ ಏಪ್ರಿಲ್ ನಿಂದ ಇಲ್ಲಿಯವರೆಗೆ ದೆಹಲಿ ಸುತ್ತಮುತ್ತಲ ಪ್ರದೇಶಗಳಲ್ಲಿ 15 ಬಾರಿ ಭೂಮಿ ಕಂಪಿಸಿದ ಅನುಭವವಾಗಿರುವುದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.
ಕಂಪನದಿಂದ ಯಾವುದೆ ಪ್ರಾಣಹಾನಿ ಹಾಗೂ ಆಸ್ತಿಪಾಸ್ತಿ ನಷ್ಟವಾದ ಬಗ್ಗೆ ವರದಿಯಾಗಿಲ್ಲ.
PublicNext
02/12/2020 12:51 pm