ಬೆಂಗಳೂರು : ರಾಜ್ಯದಲ್ಲಿ ಮುಂದಿನ 72 ಗಂಟೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಡಿ.17ರಿಂದ ಡಿ.19 ರವರೆಗೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
PublicNext
16/12/2020 07:42 pm