ಬೆಂಗಳೂರು: ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಪುನಃ ವಾಯುಭಾರ ಕುಸಿತ ಉಂಟಾಗಿದೆ. ರಾಜ್ಯದಲ್ಲಿ ಬುಧವಾರದಿಂದಲೂ ಮೋಡ ಕವಿದ ವಾತಾವರಣವಿದೆ. ಇನ್ನೂ ಎರಡು ದಿನ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಚದುರಿದಂತೆ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಶುಕ್ರವಾರ ಸಂಜೆವರೆಗೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಗುರುವಾರ ಸಂಜೆ ಮತ್ತು ಶುಕ್ರವಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.
PublicNext
17/12/2020 04:18 pm