ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿರು ಬಿಸಿಲ ನಗರಿಯಲ್ಲಿ ಮೈ ಕೊರೆಯುವ ಚಳಿ: ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು

ಬೆಂಗಳೂರು: ರಾಜ್ಯದಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮಧ್ಯೆ ಬಿರು ಬಿಸಿಲ ನಗರಿ ಬೀದರ್‌ ಜಿಲ್ಲೆಯು ಮೈ ಕೊರೆಯುವ ಚಳಿಗೆ ಸಾಕ್ಷಿಯಾಗಿದೆ.

ಬೀದರ್‌ ಜಿಲ್ಲೆಯಲ್ಲಿ ಸೋಮವಾರ ಅತ್ಯಂತ ಕನಿಷ್ಠ ತಾಪಮಾನ 6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ವಿಶೇಷವೆಂದರೆ ಇದು ರಾಜ್ಯದಲ್ಲಿ ಈ ವರ್ಷ ದಾಖಲಾದ ಅತ್ಯಂತ ಕನಿಷ್ಠ ತಾಪಮಾನವಾಗಿದೆ.

ಮಹಾರಾಷ್ಟ್ರದಿಂದ ಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಬೀದರ್‌ನಲ್ಲಿ ಸೋಮವಾರ ಗರಿಷ್ಠ 26.4 ಹಾಗೂ ಕನಿಷ್ಠ 6.0 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಕಳೆದ ಮೂರು ವರ್ಷದ ಹಿಂದೆ 6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಬೀದರ್‌ನಲ್ಲೇ ದಾಖಲಾಗಿತ್ತು. ಅಷ್ಟೇ ಅಲ್ಲದೆ 2020ರ ನವೆಂಬರ್‌ 10ರಂದು ಬೀದರ್‌ನಲ್ಲಿ 7.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

22/12/2020 12:01 pm

Cinque Terre

43.57 K

Cinque Terre

0