ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವರುಣನ ಆರ್ಭಟ: ಬೆಂಗಳೂರು, ತುಮಕೂರು ಸೇರಿ ಕೆಲವೆಡೆ ಶಾಲೆಗೆ ರಜೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾರ ಅಬ್ಬರಿಸುತ್ತಿದ್ದಾನೆ. ಪರಿಣಾಮ ಕೆಲವೆಡೆ ರಸ್ತೆಗಳು ಜಲಾವೃತಗೊಂಡು ಜನ ಜೀವನ ಅಸ್ತವ್ಯಸ್ತವಾಗಿದೆ. ಇದರಿಂದಾಗಿ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಲೆಗಳಿಗೆ ನವೆಂಬರ್‌ 19 ಮತ್ತು 20ರಂದು ರಜೆ ಘೋಷಿಸಲಾಗಿದೆ. ಬೆಂಗಳೂರು ನಗರ ಮತ್ತು ರಾಮನಗರದಲ್ಲಿ ಇಂದು (ನವೆಂಬರ್ 19)ರಂದು ರಜೆ ನೀಡಲಾಗಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್.ವಿಶಾಲ್‌ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅವರು ಸೂಚಿಸಿದ್ದಾರೆ.

Edited By : Vijay Kumar
PublicNext

PublicNext

19/11/2021 07:29 am

Cinque Terre

37.52 K

Cinque Terre

1