ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರಿ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗುತ್ತಿದ್ದು, ಜನರು ತತ್ತರಿಸಿದ್ದಾರೆ.. ಇದರ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್ ಸಿಟಿಯಲ್ಲೂ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ಇಂದಿನಿಂದ ಮೂರು ದಿನ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

ಹಾವೇರಿ, ದಾವಣಗೆರೆ, ಕೊಡಗು, ಉಡುಪಿ, ತುಮಕೂರು, ಬಾಗಲಕೋಟೆ, ಧಾರವಾಡ, ಉತ್ತರ ಕನ್ನಡ, ಗದಗ, ಬೆಂಗಳೂರು, ರಾಮನಗರ, ಹಾಸನ , ಉಡುಪಿ ಹಾಗೂ ಚಿತ್ರದುರ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಈ ಎರಡು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಆರೆಂಜ್ ಆಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಬೆಂಗಳೂರಿನ ಬಾಲಾಜಿ ಲೇಔಟ್‌ನಲ್ಲಿ ಪರಿಸ್ಥಿತಿ ಕೈ ಮೀರಿದೆ. ಪ್ರವಾಹದ ಹೊಡೆತಕ್ಕೆ ಕುಟುಂಬಗಳು ಅಕ್ಷರಶಃ ನಲುಗಿ ಹೋಗಿವೆ. ಪ್ರವಾಹದಲ್ಲಿ ಬೈಕ್, ಕಾರುಗಳು ಮುಳುಗಿವೆ. ಮಳೆಯ ನೀರಲ್ಲಿ ನಿವಾಸಿಗಳರು ಪರದಾಟ ನಡೆಸುತ್ತಿದ್ದಾರೆ. ಅತ್ತ

ಹಿಂಗಾರು ಮಳೆ ಎಫೆಕ್ಟ್‌ನಿಂದ ರಾಜ್ಯಾದ್ಯಂತ ಹಲವು ಅವಾಂತರಗಳು ಸೃಷ್ಟಿಯಾಗಿವೆ.

Edited By : Abhishek Kamoji
PublicNext

PublicNext

22/10/2024 04:36 pm

Cinque Terre

34.73 K

Cinque Terre

1

ಸಂಬಂಧಿತ ಸುದ್ದಿ