ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಲು ಮರದ ತಿಮ್ಮಕ್ಕ ಆರೋಪ: ಅಧಿಕಾರಿಗಳಿಂದ ಮರ ಎಣಿಕೆ

ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರು ಉಪಸ್ಥಿತಿಯಲ್ಲಿ ಮರಗಳ ಎಣಿಕೆ ಕಾರ್ಯ ನಡೆಯುತ್ತದೆ ಎಂದು ತಿಳಿದುಬಂದಿದೆ.

ತಾವು ನೆಟ್ಟು ಬೆಳೆಸಿದ ಮರಗಳನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆ ಅಗಲೀಕರಣದ ನೆಪದಲ್ಲಿ ಉರುಳಿಸಿದ್ದಾರೆ ಎಂದು ಈ ಹಿಂದೆ ಸಾಲು ಮರದ ತಿಮ್ಮಕ್ಕ ಆರೋಪಿಸಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲೂ ವರದಿಯಾಗಿತ್ತು. ಕುದೂರು ಮತ್ತು ಹುಲಿಕಲ್ ರಸ್ತೆಯ ಎರಡೂ ಬದಿಗಳಲ್ಲಿ ತಿಮ್ಮಕ್ಕ ನೆಟ್ಟು ಬೆಳೆಸಿದ ಮರಗಳಿವೆ. ಇಲ್ಲಿ ರಸ್ತೆ ನಿರ್ಮಾಣಕ್ಕೆ ಕಾಮಗಾರಿ ನಡೆಸಿದವರು ಮರಗಳ ಬುಡವನ್ನು ಅಗೆದು ಮಣ್ಣು ತೆಗೆದಿದ್ದಾರೆ ಎಂದು ವರದಿಯಾಗಿತ್ತು.

ರಸ್ತೆ ಕಾಮಗಾರಿಯಲ್ಲಿ ಮರಗಳಿಗೆ ಅಪಾಯ ಉಂಟಾಗಬಹುದು ಎಂಬ ಆತಂಕದ ನಡುವೆ ಸರ್ಕಾರ ಕೂಡ ಮರಗಳಿಗೆ ಹಾನಿಯಾಗದಂತೆ ನೋಡಿಕೊಳ್ಳುವಂತೆ ಆದೇಶ ನೀಡಿತ್ತು. ಆದರೆ ಅನೇಕ ಮರಗಳ ಬುಡಗಳಿಂದ ಮಣ್ಣು ತೆಗೆಯಲಾಗಿದೆ. ಇದರ ವಿರುದ್ಧ ಜಿಲ್ಲಾಧಿಕಾರಿ ಮತ್ತು ಮುಖ್ಯಮಂತ್ರಿಗೆ ದೂರು ನೀಡುವುದಾಗಿ ತಿಮ್ಮಕ್ಕ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಸ್ತುತ ಲೋಕೋಪಯೋಗಿ ಇಲಾಖೆಯ ಕಾಮಗಾರಿ ಸ್ಥಗಿತಗೊಳಿಸಲಾಗಿದ್ದು, ತಹಶೀಲ್ದಾರ್ ಬಿಜಿ ಶ್ರೀನಿವಾಸ್ ಪ್ರಸಾದ್ ಅವರು ತಿಮ್ಮಕ್ಕ ಅವರ ಉಪಸ್ಥಿತಿಯಲ್ಲಿಯೇ ಅವರು ನೆಟ್ಟು ಬೆಳೆಸಿದ್ದ ಮರಗಳ ಎಣಿಕೆ ಕಾರ್ಯ ನಡೆಸಲು ತೀರ್ಮಾನಿಸಿದ್ದಾರೆ. ಅಂತೆಯೇ ಈಗಾಗಲೇ ಬುಡದಿಂದ ಮಣ್ಣು ತೆಗೆಯಲಾಗಿರುವ ಮರಗಳ ಬುಡಕ್ಕೆ ಮತ್ತೆ ಮಣ್ಣು ಹಾಕಿಸಲಾಗಿದೆ.

Edited By : Nagaraj Tulugeri
PublicNext

PublicNext

08/12/2020 02:13 pm

Cinque Terre

48.78 K

Cinque Terre

2