ಬೆಂಗಳೂರು : ನಿರಂತರ ಮಳೆಯಿಂದ ಮನೆ ಮಠ,ಬೆಳೆ ಕಳೆದುಕೊಂಡ ಉತ್ತರ ಕರ್ನಾಟಕ ಭಾಗಗಳಲ್ಲಿ ಸಿಎಂ ಯಡಿಯೂರಪ್ಪ ಅಕ್ಟೋಬರ್ 21ರಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಬಿಎಸ್ ವೈ ವಾಯುಭಾರ ಕುಸಿತದಿಂದ ರಾಜ್ಯದ ಉತ್ತರ ಕರ್ನಾಟಕದ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ.
ಮಹಾರಾಷ್ಟ್ರದ ಜಲಾಶಯದಿಂದ ಹೆಚ್ಚುವರಿ ನೀರು ಭೀಮಾ ಮತ್ತು ಕೃಷ್ಣಾ ನದಿಗಳಿಗೆ ಹರಿದು ಬಂದಿದೆ.
ಹೀಗಾಗಿ ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಯ ಹಲವಾರು ಗ್ರಾಮಗಳು ಪೂರ್ತಿಯಾಗಿ ಮತ್ತು ಭಾಗಶಃ ಮುಳುಗಡೆಯಾಗಿದೆ.
ಅಪಾರ ಬೆಳೆ ಹಾನಿಯಾಗಿದೆ. ಸ್ಥಳೀಯ ಜಿಲ್ಲಾಡಳಿತದ ವತಿಯಿಂದ ತಕ್ಷಣದ ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗಿದೆ.
ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ವಾಸ್ತವಿಕವಾದ ಪ್ರಮಾಣವನ್ನು ಅರಿಯಲು ವೈಮಾನಿಕ ಸಮೀಕ್ಷೆ ಮಾಡುವುದು ಅವಶ್ಯಕವಾಗಿರುತ್ತದೆ.
ಹೀಗಾಗಿ ಅಕ್ಟೋಬರ್ 21ರಂದು ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
PublicNext
18/10/2020 02:22 pm